ಭೀಕರ ಅಪಘಾತ: ಪ್ರಯಾಗರಾಜ್ ಪುಣ್ಯಸ್ನಾನಕ್ಕೆ ತೆರಳಿದ್ದ ಆರು ಜನ ಸಾವು

Praygraj

ಬೆಳಗಾವಿ: ಉತ್ತರ ಪ್ರದೇಶದ ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಕುಂಭಮೇಳ ಪವಿತ್ರಸ್ನಾನಕ್ಕೆ ತೆರಳಿದ್ದ ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದ ಅರು ಜನರು ಭೀಕರ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಮಧ್ಯಪ್ರದೇಶದ ಜಬಲಪೂರ ಪೆಹರಾ‌ ಟೋಲ್ ನಾಕಾ ಬಳಿ ಸಂಭವಿಸಿದ ಅಪಘಾತದಲ್ಲಿ ಅರು ಜನ ಅಸುನೀಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. 

ಸೋಮವಾರ (ಫೆ.24) ಬೆಳಗಿನ ಜಾವ ಕ್ರೂಸರ್​ ವಾಹನ ಚಾಲಕನ ನಿಯಂತ್ರಣ ತಪ್ಪಿ ಬಸ್​ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ.

ಗೋಕಾಕ್ ತಾಲೂಕಿನ ಲಕ್ಷ್ಮಿ ಬಡಾವಣೆ ನಿವಾಸಿ ಬಾಲಚಂದ್ರ‌ ಗೌಡರ (50), ಸುನೀಲ್ ಶೇಡಶ್ಯಾಳೆ (45), ಬಸವರಾಜ್ ಕುರ್ತಿ (63), ಬಸವರಾಜ್ ದೊಡಮಾಳ್ (49), ಈರಣ್ಣ ಶೇಬಿನಕಟ್ಟಿ (27), ವಿರೂಪಾಕ್ಷ ಗುಮತಿ (61) ಮೃತ ದುರ್ದೈವಿಗಳು. 

ಗಾಯಗೊಂಡ ಮುಸ್ತಾಕ್ ಶಿಂಧಿಕುರಬೇಟ, ಸದಾಶಿವನನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು