ಚಿಕ್ಕಮಗಳೂರು: ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ ವಿಜಯೇಂದ್ರ ಅವರ ಆಪ್ತ ಸ್ನೇಹಿತನ ಬೀರೂರಿನ ಹರೀಶ್ ಅವರ ಕಾರಿಗೆ ಲಾರಿ ಡಿಕ್ಕಿ ಹೊಡೆದಿದ್ದು, ಅವರ ಸ್ನೇಹಿತ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಫೆ.28 ರಂದು ಶುಕ್ರವಾರ ರಾತ್ರಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಲಕ್ಯಾ ಕ್ರಾಸ್ ಬಳಿ ಘಟನೆ ಸಂಭವಿಸಿದೆ. ಡಿಕ್ಕಿ ರಭಸಕ್ಕೆ ಕಾರಿನ ಹಿಂಭಾಗದ ಬಲಭಾಗ ಜಖಂ ಆಗಿದೆ. ಅದೃಷ್ಟವಶಾತ್ ಹರೀಶ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬಿವೈ ವಿಜಯೇಂದ್ರ ಅವರು ಚಿಕ್ಕಮಗಳೂರಿಗೆ ಬಸವ ತತ್ವ ಕಾರ್ಯಕ್ರಮ ಹಿನ್ನೆಲೆ ಆಗಮಿಸಿದ್ದರು. ವಿಜಯೇಂದ್ರರನ್ನು ಭೇಟಿಯಾಗಲು ಬಂದಿದ್ದ ಹರೀಶ್. ಕಾರ್ಯಕ್ರಮ ಮುಗಿಸಿಕೊಂಡು ಚಿಕ್ಕಮಗಳೂರಿನಿಂದ ಶಿವಮೊಗ್ಗಕ್ಕೆ ವಾಪಸ್ಸಾಗುತ್ತಿದ್ದರು. ವಿಜಯೇಂದ್ರರ ಕಾರಿನ ಹಿಂದೆಯೇ ಹೋಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.
ವೇಗವಾಗಿ ಬಂದ ಲಾರಿ ಹರೀಶ್ ಕುಳಿತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಚಾಲಕನ ನಿರ್ಲಕ್ಶ್ಯದಿಂದ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್ ವಿಜಯೇಂದ್ರ ಬೇರೊಂದು ಕಾರಿನಲ್ಲಿ ಪ್ರಯಾಣಿಸುತ್ತಿದ್ದರಿಂದ ಪ್ರಾಣಾಪಾಯದಿಂದ ಬಚಾವ್ ಆಗಿದ್ದಾರೆ. ಪೊಲೀಸರು ಲಾರಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಚಿಕ್ಕಮಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.