ಭೀಕರ ಅಪಘಾತ: ಐವರು ಸಾವು

 

Accident in Kollegal

ಚಾಮರಾಜನಗರ: ಟಿಪ್ಪರ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಐವರು ಸ್ಥಳದಲ್ಲಿಯೇ ದಾರೂಣವಾಗಿ ಅಸುನೀಗಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಚಿಕ್ಕಿಂದುವಾಡಿ ಬಳಿಯ ಮುಖ್ಯರಸ್ತೆಯಲ್ಲಿ ನಡೆದಿದೆ.

ಮಲೆಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಶಿವರಾತ್ರಿ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಇನ್ನು ಪ್ರಾಥಮಿಕ ಮಾಹಿತಿಯ ಪ್ರಕಾರ ಕಾರಿನಲ್ಲಿದ್ದ ಮೂವರು ಪುರುಷರು ಮತ್ತು ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು