ವಿಜಯಪುರ: ಅನಧಿಕೃತವಾಗಿ ಕಂಟ್ರಿ ಪಿಸ್ತೂಲ್‌ಗಳನ್ನು ಖರೀದಿಸಿ, ಮಾರಾಟ ಮಾಡುವ ಉದ್ದೇಶದಿಂದ ಇಟ್ಟುಕೊಂಡಿದ್ದ ಅರೋಪಿ ಒಬ್ಬರನ್ನು ಪೊಲೀಸರು ಬಂಧಿಸಿದ್ದು, 2 ಪಿಸ್ತೂಲ್, 4 ಜೀವಂತ ಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಪೊಲೀಸರು ವಿಜಯಪುರದ ಇಂಡಿ ಬೈಪಾಸ್ ಹತ್ತಿರದ ರಾಷ್ಟ್ರೀಯ ಹೆದ್ದಾರಿ ಪಕ್ಕದ ಸರ್ವಿಸ್ ರಸ್ತೆಯಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.
ನಗರದ ಕುಂಬಾರ ಗಲ್ಲಿಯ ಗ್ಯಾಂಗ್ ಬಾವಡಿ ನಿವಾಸಿ ಉಮೇರ್ ಬಂದೇನವಾಜ್ ಗಿರಗಾಂವ (23) ಬಂಧಿತ ಆರೋಪಿ.
ಕೆಲ ದಿನಗಳ ಹಿಂದೆ ಒಟ್ಟು 10 ಕಂಟ್ರಿ ಪಿಸ್ತೂಲ್ ಹಾಗೂ 24 ಸಜೀವ ಗುಂಡುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದರು. ಇದೀಗ ಮತ್ತೆ ಎರಡು ಕಂಟ್ರಿ ಪಿಸ್ತೂಲ್ ವಶಪಡಿಸಿಕೊಂಡಿದ್ದಾರೆ.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ ಹಾಗೂ ರಾಮನಗೌಡ ಹಟ್ಟಿ ಮಾರ್ಗದರ್ಶನ, ಸಿಪಿಐ ಮಲ್ಲಯ್ಯ ಮಠಪತಿ, ಪಿಎಸ್‌ಐ ಜ್ಯೋತಿ ಖೋತ ಮತ್ತಿತರ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಎಪಿಎಂಸಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.