ದಾವಣಗೆರೆ: ಭದ್ರಾ ಬಲದಂಡೆ ನಾಲೆ ಕೊರೆದು ನೀರು ಬಿಡುತ್ತಿರುವ ಕ್ರಮವನ್ನು ಖಂಡಿಸಿ ದಾವಣಗೆರೆ ಬಂದ್ ಗೆ ಕರೆ ನೀಡಲಾಗಿತ್ತು, ಬಂದ್ ವೇಳೆ ಬಸ್ ಓಡಿಸಿದ್ದಕ್ಕೆ ಬಿಜೆಪಿ ಮುಖಂಡ ಲೋಕಿಕೆರೆ ನಾಗರಾಜ್ ಕಲ್ಲು ಹಿಡಿದು ಬೆದರಿಕೆ ಹಾಕಿರುವ ವಿಡಿಯೋ ವೈರಲ್ ಆಗಿದೆ. ಪ್ರತಿಭಟನೆಯ ವೇಳೆ ಟೈರ್ಗೆ ಬೆಂಕಿ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ವಾಹನ ಚಾಲಕರಿಗೆ ಬೆದರಿಕೆ, ಬೇಕರಿಗೆ ಬಲವಂತವಾಗಿ ಬಂದ್ ಮಾಡಿಸಿದ ಆರೋಪ ಕೇಳಿಬಂದಿದೆ. ಬಂದ್ ಗೆ ಹಲವು ಸಂಘಟನೆಗಳು ಬೆಂಬಲಿಸಿದ್ದರೆ, ಕಾಂಗ್ರೆಸ್ ಇದನ್ನು ವಿರೋಧಿಸಿದೆ.
Tags
News