ನನಗೂ ಮಂತ್ರಿಯಾಗುವ ಆಸೆ ಇದೆ: ಶಾಸಕ ಕಾಶಪ್ಪನವರ್

ಬೆಂಗಳೂರು: ಶೀಘ್ರದಲ್ಲೇ ರಾಜ್ಯ ರಾಜಕೀಯದಲ್ಲಿ ಭಾರಿ ಬದಲಾವಣೆ ಆಗಲಿದೆ ಎಂದು ಇತ್ತೀಚೆಗೆ ಸಚಿವ ಕೆ.ಎನ್ ರಾಜಣ್ಣ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಶಾಸಕ ವಿಜಯಾನಂದ ಕಾಶಪ್ಪನವರು ನನಗೂ ಮಂತ್ರಿಯಾಗುವ ಅರ್ಹತೆ ಹಾಗೂ ಆಸೆ ಇದೆ ಎಂದು ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಇಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು ಕೆ.ಎನ್ ರಾಜಣ್ಣ ಅವರ ಬಗ್ಗೆ ನಾನು ಮಾತನಾಡುವುದಿಲ್ಲ. ಮುಖ್ಯಮಂತ್ರಿ ಬದಲಾವಣೆ ಕುರಿತು ವರಿಷ್ಠರು ನಿರ್ಧರಿಸುತ್ತಾರೆ. ನನಗೂ ಮಂತ್ರಿ ಆಗಬೇಕು ಎಂಬ ಆಸೆ ಇದೆ ಎನ್ನುವ ಕನಸು ಬಿಚ್ಚಿಟ್ಟಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು