ಕೊಲೆಯಾದ ಮಗುವನ್ನು ವಿಕಾಸ್ (5) ಎಂದು ಗುರುತಿಸಲಾಗಿದೆ. ಪ್ರತ್ಯಕ್ಷದರ್ಶಿಗಳ ಹೇಳಿಕೆಯ ಪ್ರಕಾರ, ಆರೋಪಿಯು ಬೈಕ್‌ನಲ್ಲಿ ಬಂದು ಏಕಾಏಕಿ ವಿಕಾಸ್‌ನ ಮನೆಗೆ ನುಗ್ಗಿದ್ದಾನೆ. ನಂತರ ಸಲಾಕೆ ಬಳಸಿ ಬಾಲಕನ ಶಿರಚ್ಛೇದ ಮಾಡಿ ಹತ್ಯೆಗೈದಿದ್ದಾನೆ. ಈ ಅಮಾನುಷ ಕೃತ್ಯ ನಡೆಯುವ ಮುನ್ನ ಆರೋಪಿ ಸ್ಥಳೀಯ ಅಂಗಡಿಯೊಂದರಲ್ಲಿ ಕಳ್ಳತನ ಮಾಡಲು ಸಹ ಯತ್ನಿಸಿದ್ದ ಎಂದು ತಿಳಿದುಬಂದಿದೆ.
ಬಾಲಕನನ್ನು ಹತ್ಯೆಗೈದ ನಂತರ ಆರೋಪಿಯು ಮಗುವಿನ ಪೋಷಕರ ಮೇಲೂ ಹಲ್ಲೆ ನಡೆಸಿದ್ದಾನೆ. ಮಗುವಿನ ತಾಯಿ ಮತ್ತು ಪೋಷಕರ ಚೀರಾಟ ಕೇಳಿ ಅಕ್ಕಪಕ್ಕದ ಮನೆಯವರು ತಕ್ಷಣವೇ ಸ್ಥಳಕ್ಕೆ ಧಾವಿಸಿ, ಆರೋಪಿಯನ್ನು ಹಿಡಿದು ಥಳಿಸಿದ್ದಾರೆ.
ಆರೋಪಿಯು ಕೊಲೆಯಾದ ಬಾಲಕನ ಕುಟುಂಬಕ್ಕೆ ಯಾವುದೇ ರೀತಿ ಪರಿಚಿತನಾಗಿರಲಿಲ್ಲ ಮತ್ತು ಏಕಾಏಕಿ ಮನೆಗೆ ನುಗ್ಗಿ ಈ ಕೃತ್ಯ ಎಸಗಿದ್ದ. ಆತನನ್ನು ಪೊಲೀಸರಿಗೆ ಒಪ್ಪಿಸುವ ಮುನ್ನ ಗ್ರಾಮಸ್ಥರು ಹಿಡಿದು ಥಳಿಸಿದ್ದರು. ನಂತರ ಪೊಲೀಸರು ಆರೋಪಿಯನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ, ಗ್ರಾಮಸ್ಥರ ಥಳಿತದ ಏಟಿನಿಂದಾಗಿ ಆತ ಮಾರ್ಗ ಮಧ್ಯೆಯೇ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.
ಆರೋಪಿಯು ಮಾನಸಿಕ ಅಸ್ವಸ್ಥನಾಗಿದ್ದ ಎಂದು ವರದಿಯಾಗಿದೆ. ಈ ಭೀಕರ ಘಟನೆ ಮಧ್ಯಪ್ರದೇಶದಲ್ಲಿ ತೀವ್ರ ಆತಂಕ ಮತ್ತು ಕೋಪಕ್ಕೆ ಕಾರಣವಾಗಿದೆ.