ಕರೂರು ಕಾಲ್ತುಳಿತ ದುರಂತ: ಮೃತರ ಕುಟುಂಬಕ್ಕೆ ತಲಾ ₹20 ಲಕ್ಷ ಪರಿಹಾರ ಘೋಷಿಸಿದ ನಟ ವಿಜಯ್

ಚೆನ್ನೈ: ತಮಿಳುನಾಡಿನ ಕರೂರಿನಲ್ಲಿ ನಟ ಮತ್ತು ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಸಂಸ್ಥಾಪಕ ವಿಜಯ್ ಅವರ ರಾಜಕೀಯ ರ್ಯಾಲಿಯಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತ ದುರಂತಕ್ಕೆ ನಟ ವಿಜಯ್ ತೀವ್ರ ಸಂತಾಪ ಸೂಚಿಸಿ, ಸಂತ್ರಸ್ತರಿಗೆ ಪರಿಹಾರವನ್ನು ಘೋಷಿಸಿದ್ದಾರೆ.

ದುರಂತದಲ್ಲಿ ಸಾವಿನ ಸಂಖ್ಯೆ 40ಕ್ಕೆ ಏರಿಕೆ

ಕರೂರ್‌ನಲ್ಲಿ ನಡೆದ ಈ ದುರಂತದಲ್ಲಿ ಕನಿಷ್ಠ 40 ಜನರು ಸಾವನ್ನಪ್ಪಿದ್ದು, ಸುಮಾರು 100 ಜನರು ಗಾಯಗೊಂಡಿದ್ದಾರೆ. ರ್ಯಾಲಿಯಲ್ಲಿ ಭಾಗವಹಿಸಲು ಬಂದಿದ್ದ ಸಾವಿರಾರು ಜನರಿಂದಾಗಿ ಕಾಲ್ತುಳಿತ ಸಂಭವಿಸಿದ್ದು, ಇದು ತಮಿಳುನಾಡಿನಲ್ಲಿ ದೊಡ್ಡ ಆಘಾತ ಮೂಡಿಸಿದೆ.

ವಿಜಯ್ ಕಡೆಯಿಂದ ಪರಿಹಾರ ಘೋಷಣೆ

ಘಟನೆಯ ತೀವ್ರತೆಯನ್ನು ಅರಿತ ನಟ ವಿಜಯ್ ಅವರು, ಮೃತರ ಕುಟುಂಬಗಳಿಗೆ ಮತ್ತು ಗಾಯಗೊಂಡವರಿಗೆ ಆರ್ಥಿಕ ನೆರವು ಘೋಷಿಸಿದ್ದಾರೆ. ಮೃತ ಕುಟುಂಬಗಳಿಗೆ ತಲಾ ₹20 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ತಲಾ ₹2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಈ ದುರಂತವು ರಾಜಕೀಯ ರ್ಯಾಲಿಗಳ ಆಯೋಜನೆ ಮತ್ತು ಸಾರ್ವಜನಿಕ ಸುರಕ್ಷತಾ ಮಾನದಂಡಗಳ ಕುರಿತು ಗಂಭೀರ ಪ್ರಶ್ನೆಗಳನ್ನು ಎತ್ತಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು