ವಿಪ್ರೋ ಕ್ಯಾಂಪಸ್ ಜಾಗ ನೀಡಲು ನಿರಾಕರಿಸಿದ ಅಜೀಂ ಪ್ರೇಮ್ ಜಿ

ಬೆಂಗಳೂರು: ಬೆಂಗಳೂರಿನ ಪ್ರಮುಖ ಟ್ರಾಫಿಕ್ ಸಮಸ್ಯೆ ಇರುವ ಹೊರ ವರ್ತುಲ ರಸ್ತೆ (Outer Ring Road - ORR) ಯಲ್ಲಿ ಸಂಚಾರ ದಟ್ಟಣೆಯನ್ನು ಸುಗಮಗೊಳಿಸಲು ರಾಜ್ಯ ಸರ್ಕಾರಕ್ಕೆ ತಮ್ಮ ಕಂಪನಿಯ ಕ್ಯಾಂಪಸ್‌ಗೆ ಸೇರಿದ ಭೂಮಿಯನ್ನು (Wipro Campus Land) ನೀಡಲು ವಿಪ್ರೋ ಸಂಸ್ಥಾಪಕ ಅಜೀಂ ಪ್ರೇಮ್‌ಜಿ ಅವರು ನಿರಾಕರಿಸಿದ್ದಾರೆ.

ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗುರುವಾರ ಪತ್ರ ಬರೆದಿರುವ ಅಜೀಂ ಪ್ರೇಮ್‌ಜಿ, ಬೆಂಗಳೂರಿನ ಸಂಚಾರ ದಟ್ಟಣೆಗೆ ಸಂಬಂಧಿಸಿದ ಸರ್ಕಾರದ ಉಪಕ್ರಮಗಳ ಕುರಿತು ಮುಖ್ಯಮಂತ್ರಿಯವರ ನಾಯಕತ್ವವನ್ನು ಶ್ಲಾಘಿಸಿದ್ದಾರೆ.

ಆದರೆ, ಬೆಂಗಳೂರಿನ ಸಂಚಾರ ದಟ್ಟಣೆಯು ಅತ್ಯಂತ 'ಸಂಕೀರ್ಣ' ಸಮಸ್ಯೆಯಾಗಿದೆ ಎಂದು ಪ್ರೇಮ್‌ಜಿ ಅವರು ತಮ್ಮ ಪತ್ರದಲ್ಲಿ ಒತ್ತಿ ಹೇಳಿದ್ದಾರೆ. "ಈ ಸಮಸ್ಯೆಯನ್ನು ಪರಿಹರಿಸಲು ಒಂದೇ ಒಂದು ಹಂತದ ಪರಿಹಾರ ಇರುವ ಸಾಧ್ಯತೆಯಿಲ್ಲ," ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಈ ಮೂಲಕ, ತಮ್ಮ ಕ್ಯಾಂಪಸ್‌ನ ಭೂಮಿಯನ್ನು ರಸ್ತೆ ವಿಸ್ತರಣೆಗೆ (ORR Expansion) ನೀಡಲು ಸಾಧ್ಯವಿಲ್ಲ ಎಂಬ ನಿಲುವನ್ನು ಅವರು ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಟ್ರಾಫಿಕ್ ದಟ್ಟಣೆ ಇತ್ತೀಚೆಗೆ ದೊಡ್ಡ ಸಮಸ್ಯೆಯಾಗಿದ್ದು, ಸರ್ಕಾರದ ವಿವಿಧ ರಸ್ತೆ ವಿಸ್ತರಣೆ ಮತ್ತು ಮೂಲಸೌಕರ್ಯ ಯೋಜನೆಗಳಿಗೆ ಖಾಸಗಿ ಸಂಸ್ಥೆಗಳ ಭೂಮಿ ಅಗತ್ಯವಿರುವ ಸಂದರ್ಭದಲ್ಲಿ ಈ ಬೆಳವಣಿಗೆ ನಡೆದಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು