ವೃತ್ತಿಯಲ್ಲಿ ಸಮಾನ ಸೇವೆ ನೀಡಿ: ಫಾರ್ಮಸಿಸ್ಟ್‌ಗಳಿಗೆ ಸಿಎಂ ಸಿದ್ದರಾಮಯ್ಯ ಕರೆ

ಬೆಂಗಳೂರು: ಫಾರ್ಮಸಿಸ್ಟ್‌ಗಳು ವೈದ್ಯರಷ್ಟೇ ಪ್ರಮುಖರು. ಅವರು ತಮ್ಮ ವೃತ್ತಿ ಜೀವನದಲ್ಲಿ ಶ್ರೀಮಂತ, ಬಡವ, ಜಾತಿ ಅಥವಾ ಧರ್ಮದ ಆಧಾರದ ಮೇಲೆ ಯಾವುದೇ ಭೇದ-ಭಾವ ಮಾಡದೆ ಎಲ್ಲರಿಗೂ ಸಮಾನವಾಗಿ ಚಿಕಿತ್ಸೆ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ಅವರು ಇಂದು ಬೆಂಗಳೂರಿನ ಲಿಟಲ್ ಫ್ಲವರ್ ಶಿಕ್ಷಣ ಸಮೂಹದ ಕಾಲೇಜಿನ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು.

ಆರೋಗ್ಯ ಕ್ಷೇತ್ರಕ್ಕೆ ಫಾರ್ಮಸಿಸ್ಟ್‌ಗಳ ಮಹತ್ವದ ಕೊಡುಗೆ

ಫಾರ್ಮಸಿಸ್ಟ್‌ಗಳು ಆರೋಗ್ಯ ಕ್ಷೇತ್ರಕ್ಕೆ ಮಹತ್ವದ ಕೊಡುಗೆ ನೀಡುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಶ್ಲಾಘಿಸಿದರು. ಡಾ. ಕೆ. ವೆಂಕಟಗಿರಿಯವರ ಮಾಲೀಕತ್ವದ ಲಿಟಲ್ ಫ್ಲವರ್ ಸಂಸ್ಥೆಯಲ್ಲಿ ಶಿಕ್ಷಣ ಪಡೆದ ಸಾವಿರಾರು ವಿದ್ಯಾರ್ಥಿಗಳು ಯಶಸ್ವಿ ಭವಿಷ್ಯ ರೂಪಿಸಿಕೊಂಡಿದ್ದಾರೆ. ಇಲ್ಲಿ ಫಾರ್ಮಸಿಸ್ಟ್ ಶಿಕ್ಷಣ ಪಡೆದು ದೇಶ-ವಿದೇಶಗಳಲ್ಲಿ ಸೇವೆ ಸಲ್ಲಿಸುತ್ತಿರುವುದು ನಿಜಕ್ಕೂ ಶ್ಲಾಘನೀಯ ಎಂದರು.

ಬಡವರಿಗೆ ಉಚಿತ ಚಿಕಿತ್ಸೆಗೆ ಕೈಜೋಡಿಸಿ

ಸಮಾಜದಲ್ಲಿನ ಬಡ ರೋಗಿಗಳಿಗೆ ಉತ್ತಮ ರೀತಿಯಲ್ಲಿ ಚಿಕಿತ್ಸೆ ನೀಡಬೇಕು. ಖಾಸಗಿ ಚಿಕಿತ್ಸಾ ವೆಚ್ಚಗಳನ್ನು ಭರಿಸಲು ಅಶಕ್ತರಾಗಿರುವ ಬಡವರಿಗೆ ಸರ್ಕಾರವು ಸರ್ಕಾರಿ ಆಸ್ಪತ್ರೆಗಳ ಮೂಲಕ ಸೌಲಭ್ಯಗಳನ್ನು ಒದಗಿಸುತ್ತಿದೆ. ಸರ್ಕಾರದ ಈ ಆಶಯದೊಂದಿಗೆ ಫಾರ್ಮಸಿಸ್ಟ್‌ಗಳು ಸಹ ಕೈಜೋಡಿಸಬೇಕು. ಬಡ ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡುವ ಮೂಲಕ ಸಾರಥಕ ಸೇವೆ ಸಲ್ಲಿಸಬೇಕು ಎಂದು ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ಕೋರಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು