ಫ್ಲೆಕ್ಸ್ ಕಟ್ಟುವ ವಿಚಾರಕ್ಕೆ ಗಲಾಟೆ
ಈ ಬಗ್ಗೆ ಮಾಹಿತಿ ನೀಡಿದ ದಾವಣಗೆರೆ ಎಸ್ಪಿ ಉಮಾ ಪ್ರಶಾಂತ್ ಅವರು, ಸೆಪ್ಟೆಂಬರ್ 24ರ ರಾತ್ರಿ ದಾವಣಗೆರೆಯ ಕಾರ್ಲ್ ಮಾರ್ಕ್ಸ್ ನಗರದಲ್ಲಿ 'ಐ ಲವ್ ಮೊಹಮ್ಮದ್' ಫ್ಲೆಕ್ಸ್ ಕಟ್ಟುವ ವಿಚಾರವಾಗಿ ಎರಡು ಗುಂಪುಗಳ ನಡುವೆ ಸಂಘರ್ಷ ನಡೆದಿತ್ತು. ಈ ಘಟನೆ ಸಂಬಂಧ ಆಜಾದ್ ನಗರ ಠಾಣೆಯಲ್ಲಿ ದೂರು ಮತ್ತು ಪ್ರತಿದೂರು ದಾಖಲಾಗಿದ್ದವು ಎಂದು ತಿಳಿಸಿದ್ದಾರೆ.
ಪ್ರಕರಣದ ತನಿಖೆಗಾಗಿ ರಚಿಸಲಾಗಿದ್ದ ಪೊಲೀಸರ ನಾಲ್ಕು ಪ್ರತ್ಯೇಕ ತಂಡಗಳು ಇದುವರೆಗೆ 7 ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿವೆ.
ಪ್ರಚೋದನಕಾರಿ ಪೋಸ್ಟ್‌ಗಳ ವಿರುದ್ಧ ಎಚ್ಚರಿಕೆ
ಎಸ್ಪಿ ಉಮಾ ಪ್ರಶಾಂತ್ ಅವರು ನಗರದಲ್ಲಿ ಶಾಂತಿ ಮತ್ತು ಸೌಹಾರ್ದತೆ ಕಾಪಾಡುವ ನಿಟ್ಟಿನಲ್ಲಿ ಎರಡೂ ಕೋಮಿನ ಮುಖಂಡರು ಮತ್ತು ನಾಗರಿಕರು ಪೊಲೀಸರೊಂದಿಗೆ ಸಹಕರಿಸುವಂತೆ ಮನವಿ ಮಾಡಿದ್ದಾರೆ.
ಜೊತೆಗೆ, ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ರೀತಿಯ ಪ್ರಚೋದನಕಾರಿ ಪೋಸ್ಟ್ಗಳನ್ನು ಹಂಚಿಕೊಳ್ಳಬಾರದು ಎಂದು ಎಚ್ಚರಿಕೆ ನೀಡಿದ್ದಾರೆ. ಅಂತಹ ಪೋಸ್ಟ್‌ಗಳು ಕಂಡುಬಂದರೆ, ಪ್ರಚೋದನೆ ನೀಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ.
