ಆಯತಪ್ಪಿ ಬಿದ್ದ ಮಹಿಳೆ ಮೇಲೆಯೇ ಹರಿದ ಬಸ್; ಸ್ಥಳದಲ್ಲೇ ಸಾವು

ತುಮಕೂರು: ಹಬ್ಬಕ್ಕೆಂದು ಮಗಳ ಮನೆಗೆ ಬಂದಿದ್ದ ಮಹಿಳೆಯೊಬ್ಬರು ವಾಪಸ್ ಊರಿಗೆ ಪ್ರಯಾಣಿಸುತ್ತಿದ್ದಾಗ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ದುರದೃಷ್ಟಕರ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಬುಕ್ಕಾಪಟ್ಟಣ ಹೋಬಳಿಯ ಮಾರಗೊಂಡನಹಳ್ಳಿಯಲ್ಲಿ ನಡೆದಿದೆ.

ಮೃತ ಮಹಿಳೆಯನ್ನು ಗುಡ್ಡದ ಜೋಗಿಹಳ್ಳಿ ಗ್ರಾಮದ ಕಾಮಕ್ಕ (64) ಎಂದು ಗುರುತಿಸಲಾಗಿದೆ. ಕಾಮಕ್ಕ ಅವರು ಬಸ್ ನಿಲುಗಡೆ ಸ್ಥಳದಲ್ಲಿ ಇಳಿಯುತ್ತಿದ್ದಾಗ ಆಯತಪ್ಪಿ ರಸ್ತೆಗೆ ಕೆಳಗೆ ಬಿದ್ದಿದ್ದಾರೆ. ಅದೇ ಸಂದರ್ಭದಲ್ಲಿ ಬಸ್ ಚಲಿಸಿದ ಕಾರಣ, ಬಸ್ಸಿನ ಹಿಂಬದಿ ಚಕ್ರವು ಕೆಳಗೆ ಬಿದ್ದ ಮಹಿಳೆಯ ಮೇಲೆಯೇ ಹರಿದು ಹೋಗಿದೆ.

ಗಂಭೀರವಾಗಿ ಗಾಯಗೊಂಡಿದ್ದ ಕಾಮಕ್ಕ ಅವರನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಮಾರ್ಗಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ.

ಈ ಕುರಿತು ಶಿರಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಬಸ್ ಚಾಲಕನ ಅಜಾಗರೂಕತೆ ಕುರಿತು ತನಿಖೆ ಮುಂದುವರೆಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು