ಭೀಕರ ರಸ್ತೆ ಅಪಘಾತ; ಬೈಕ್‌ನಲ್ಲಿ ತೆರಳುತ್ತಿದ್ದ ದಂಪತಿ ದುರ್ಮರಣ

ಬೆಂಗಳೂರು: ಕೋಲಾರ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಟಿಟಿ ವಾಹನವೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ವರದಿಯಾಗಿದೆ.

ಈ ಅಪಘಾತವು ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಸುಣ್ಣಕಲ್ಲು ಕ್ರಾಸ್ ಬಳಿ ಸಂಭವಿಸಿದೆ. ಮೃತರನ್ನು ರಾಮಾಂಜಲು (36) ಮತ್ತು ಕಲಾವತಿ (27) ಎಂದು ಗುರುತಿಸಲಾಗಿದೆ.

ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ ಯರಂವಾರಪಲ್ಲಿ ನಿವಾಸಿಗಳಾದ ಈ ದಂಪತಿಗಳು ತಮ್ಮ ಸ್ವಗ್ರಾಮದಿಂದ ಬೆಂಗಳೂರಿನಲ್ಲಿ ಕೆಲಸಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ. ಈ ವೇಳೆ ಟಿಟಿ ವಾಹನವು ಬೈಕ್‌ಗೆ ಡಿಕ್ಕಿ ಹೊಡೆದಿದ್ದು, ದಂಪತಿಗಳು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು