ಬೆಂಗಳೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಅವರ 'ಬೆಂಗಳೂರು ನಡಿಗೆ' ಕಾರ್ಯಕ್ರಮದ ವೇಳೆ ಹೈಡ್ರಾಮ ಸೃಷ್ಟಿಸಿದ್ದ ಬಿಜೆಪಿ ಶಾಸಕ ಮುನಿರತ್ನ ಇದೀಗ ಮತ್ತೊಂದು ಸ್ಫೋಟಕ ಹೇಳಿಕೆ ನೀಡಿ ಸದ್ದು ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಮಾಟ ಮಂತ್ರ ಮಾಡಲಾಗಿದೆ ಎಂದು ಮುನಿರತ್ನ ಗಂಭೀರ ಆರೋಪ ಮಾಡಿದ್ದಾರೆ.
ಸಿದ್ದರಾಮಯ್ಯ ವಶೀಕರಣ, ಕೋಣ ಬಲಿ ಆರೋಪ
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುನಿರತ್ನ ಅವರು, ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಮಾಟ ಮಂತ್ರ ಮಾಡಲಾಗಿದೆ. ಅವರನ್ನು ಡಬ್ಬದಲ್ಲಿ ಹಾಕಿ ವಶೀಕರಣ ಮಾಡಲಾಗಿದೆ. ಇದಕ್ಕಾಗಿ ಕೋಣವನ್ನೂ ಬಲಿ ಕೊಟ್ಟಿದ್ದಾರೆ. ಈ ಕಾರಣದಿಂದಾಗಿಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಕಾಗಿದ್ದಾರೆ ಎಂದು ಮುನಿರತ್ನ ಹೊಸ ಬಾಂಬ್ ಸಿಡಿಸಿದ್ದಾರೆ.
ಇನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧವೂ ಮಾಟ ಮಂತ್ರ ಮಾಡಲಾಗಿದೆ. ಅದಕ್ಕೆ ಅವರಿಗೆ ಆರೋಗ್ಯ ಸರಿಯಿಲ್ಲ ಎಂದು ಆರೋಪಿಸಿದ್ದಾರೆ.
ಈ ಹೇಳಿಕೆಗಳ ಮೂಲಕ, ಮುನಿರತ್ನ ಅವರು ಪರೋಕ್ಷವಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರ ವಿರುದ್ಧ ಮಾಟ ಮಂತ್ರದಂತಹ ಕೃತ್ಯಗಳನ್ನು ನಡೆಸಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಶಾಸಕರ ಈ ವಿವಾದಾತ್ಮಕ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿದೆ.
