ಹಾಡಹಗಲೇ ಯುವಕನ ಬರ್ಬರ ಕೊಲೆ

ಮೈಸೂರು (Mysuru): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಹಾಡಹಗಲೇ ಯುವಕನೊಬ್ಬನ ಬರ್ಬರ ಹತ್ಯೆ ನಡೆದಿದೆ. ಮೈಸೂರು ನಗರದ ವಸ್ತು ಪ್ರದರ್ಶನ (Exhibition) ಮುಂಭಾಗದಲ್ಲಿ ಈ ಘಟನೆ ಸಂಭವಿಸಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಮೃತರನ್ನು ಕ್ಯಾತಮಾರನಹಳ್ಳಿ ನಿವಾಸಿ ಗಿಲ್ಕಿ ವೆಂಕಟೇಶ್ ಎಂದು ಗುರುತಿಸಲಾಗಿದೆ.

ಪ್ರತ್ಯಕ್ಷದರ್ಶಿಗಳ ಪ್ರಕಾರ, 4 ರಿಂದ 5 ಮಂದಿಯಿದ್ದ ಯುವಕರ ಗುಂಪೊಂದು ಗಿಲ್ಕಿ ವೆಂಕಟೇಶ್ ಅವರ ಮೇಲೆ ದಾಳಿ ಮಾಡಿದೆ. ಗುಂಪು ಮೊದಲು ಯುವಕನ ಕಣ್ಣಿಗೆ ಖಾರದ ಪುಡಿಯನ್ನು ಎರಚಿ ದೃಷ್ಟಿ ತಪ್ಪಿಸಿದೆ. ನಂತರ ಮಾರಕಾಸ್ತ್ರಗಳನ್ನು ಬಳಸಿ ಮನಸೋಇಚ್ಛೆ ಕೊಚ್ಚಿ, ಭೀಕರವಾಗಿ ಹತ್ಯೆ ಮಾಡಿ ಪರಾರಿಯಾಗಿದೆ.

ಪೊಲೀಸರು ಕೊಲೆಗೆ ನಿಖರ ಕಾರಣ ಮತ್ತು ಆರೋಪಿಗಳ ಪತ್ತೆಗಾಗಿ ತನಿಖೆ ಮುಂದುವರೆಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು