ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸಮೀಕ್ಷೆಯ ಬಗ್ಗೆ ಹರಡುತ್ತಿರುವ ವದಂತಿಗಳಿಗೆ ಸ್ಪಷ್ಟನೆ ನೀಡಿ, ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸುವ ಅಗತ್ಯವಿಲ್ಲ: ಸಮೀಕ್ಷೆಯಲ್ಲಿ ಒಟ್ಟು 60 ಪ್ರಶ್ನೆಗಳಿವೆ. ಜನರು 60 ಪ್ರಶ್ನೆಗಳಿಗೂ ಉತ್ತರಿಸುವ ಅಗತ್ಯವಿಲ್ಲ. ಕೆಲವೇ ಪ್ರಮುಖ ಪ್ರಶ್ನೆಗಳಿಗೆ ಉತ್ತರಿಸಿದರೆ ಸಾಕು. ನಾನೇ ಕೇವಲ 35 ಪ್ರಶ್ನೆಗಳಿಗೆ ಮಾತ್ರ ಉತ್ತರ ನೀಡಿದ್ದೇನೆ ಎಂದು ಅವರು ತಿಳಿಸಿದರು.
ಸಮೀಕ್ಷೆ ನಡೆಸುವವರು ವೈಯಕ್ತಿಕವಾಗಿ ಯಾವುದೇ ಪ್ರಶ್ನೆಗಳನ್ನು ಜನರನ್ನು ಕೇಳುವಂತಿಲ್ಲ. ಸಮೀಕ್ಷೆಯಿಂದ ಯಾವುದೇ ಮಾಹಿತಿಗಳು ಬಹಿರಂಗವಾಗುವುದಿಲ್ಲ. ಮಾಹಿತಿಗಳನ್ನು ಬಹಿರಂಗಪಡಿಸಬಾರದು ಎಂದು ನ್ಯಾಯಾಲಯದ ಆದೇಶವಿದೆ. ಆದರೂ ನಾಯಕರುಗಳು ಯಾಕೆ ಹೀಗೆ ತಪ್ಪು ಮಾಹಿತಿ (Mislead) ನೀಡುತ್ತಿದ್ದಾರೆ ಎಂಬುದು ಗೊತ್ತಿಲ್ಲ," ಎಂದು ಅವರು ಆತಂಕ ವ್ಯಕ್ತಪಡಿಸಿದರು.
ಈ ಸಮೀಕ್ಷೆಯು ಕೇವಲ ಹಿಂದುಳಿದ ವರ್ಗಗಳಿಗೆ ಮಾತ್ರ ಸೀಮಿತವಾಗಿಲ್ಲ. ಇದು ರಾಜ್ಯದ ಎಲ್ಲಾ ವರ್ಗಗಳಿಗೂ ಅನ್ವಯಿಸುತ್ತದೆ. ಎಲ್ಲರೂ ಸಮೀಕ್ಷೆಯಲ್ಲಿ ಭಾಗವಹಿಸಬೇಕು. ಇಲ್ಲವಾದರೆ ತಪ್ಪು ಸಂದೇಶ ರವಾನೆಯಾದಂತೆ ಆಗುತ್ತದೆ ಎಂದು ಅವರು ಮನವಿ ಮಾಡಿದರು.
ಗಣತಿದಾರರು ಒಂದು ದಿನಕ್ಕೆ ಕನಿಷ್ಠ 10 ಮನೆಗಳ ಸಮೀಕ್ಷೆ ನಡೆಸಬೇಕು ಮತ್ತು ನಿಗದಿಪಡಿಸಿದ 12 ದಿನಗಳಲ್ಲಿ ಸಮೀಕ್ಷಾ ಕಾರ್ಯವನ್ನು ಸಂಪೂರ್ಣವಾಗಿ ಮುಗಿಸಬೇಕು ಎಂದು ಅವರು ನಿರ್ದೇಶನ ನೀಡಿದ್ದಾರೆ.