ಕಾಂಗ್ರೆಸ್ ಜನ್ಮ ಜನ್ಮದಲ್ಲೂ ಅಧಿಕಾರಕ್ಕೆ ಬರುವುದಿಲ್ಲ: ಬ್ರಹ್ಮಾಂಡ ಗುರೂಜಿ ಸ್ಫೋಟಕ ಭವಿಷ್ಯ

ಹಾಸನ: ಬ್ರಹ್ಮಾಂಡ ಗುರೂಜಿ ಅವರು ರಾಜ್ಯ ರಾಜಕೀಯದ ಕುರಿತು ಮತ್ತೆ ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಹಾಸನಾಂಬೆ ದೇವಿಯ ದರ್ಶನದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಗುರೂಜಿ, ಕಾಂಗ್ರೆಸ್ ಸರ್ಕಾರದ ಅವಧಿ ಇದೇ ಕೊನೆಯಾಗಿದೆ. ಇದಾದ ಮೇಲೆ ಅವರಿಗೆ ಜನ್ಮ ಜನ್ಮದಲ್ಲೂ ಅಧಿಕಾರಕ್ಕೆ ಬರುವುದಿಲ್ಲ ಎಂದು ಭವಿಷ್ಯ ನುಡಿದಿದ್ದಾರೆ.

ರಾಜಕೀಯ ಭವಿಷ್ಯದ ಜೊತೆಗೆ, ಗುರೂಜಿ ಅವರು ಪ್ರಕೃತಿಯ ಬಗ್ಗೆಯೂ ಆಘಾತಕಾರಿ ಮುನ್ಸೂಚನೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಪ್ರಳಯ ಆಗುತ್ತದೆ. ಉತ್ತರ ಭಾರತ ಮತ್ತು ಉತ್ತರ ಕರ್ನಾಟಕ ಭಾಗಗಳು ಮುಳುಗಡೆಯಾಗಲಿವೆ ಎಂದು ಹೇಳಿದ್ದಾರೆ. ಇದರ ಮುಂದುವರಿದ ಭಾಗವಾಗಿ, ಕರ್ನಾಟಕ ಮೂರು ಭಾಗವಾಗಲಿದ್ದು, ಇಡೀ ಭಾರತ ದೇಶವು ಎರಡು ಭಾಗವಾಗುತ್ತದೆ ಎಂದು ತಿಳಿಸಿದ್ದಾರೆ. ಇದೆಲ್ಲವೂ ಮುನ್ಸೂಚನೆಯಾಗಿದ್ದು, ಇದೊಂದು ಕೊನೆಯ ವಿಶೇಷವಾದ ಸಂದರ್ಭವಾಗಿದೆ. ಮುಂದೆ ಆಗುವುದನ್ನು ತಾಯಿ ಸೂಚನೆ ಕೊಟ್ಟಿದ್ದಾಳೆ ಎಂದು ಭವಿಷ್ಯ ನುಡಿದಿದ್ದಾರೆ.

ರಾಜ್ಯ ರಾಜಕೀಯದ ಪ್ರಸ್ತುತ ಸನ್ನಿವೇಶದ ಬಗ್ಗೆ ಮಾತನಾಡಿದ ಅವರು, "ರಾಜ್ಯ ರಾಜಕೀಯದಲ್ಲಿ ಸ್ಥಾನ ಪಲ್ಲಟವಾಗಲಿದೆ" ಎಂದು ಹೇಳಿದ್ದಾರೆ. ಅಲ್ಲದೆ, "ಇಡೀ ಜಗತ್ತಿನ ಇತಿಹಾಸದ ಪುಟದಲ್ಲಿ ಕರ್ನಾಟಕ ರಾಜ್ಯ ಕುರ್ಚಿಗಾಗಿ ಒಡೆದಾಡಿಕೊಳ್ಳುವುದರಲ್ಲಿ ಹೆಸರುವಾಸಿಯಾಗುತ್ತದೆ" ಎಂದು ವಿಶ್ಲೇಷಿಸಿದ್ದಾರೆ. ಸಂಕ್ರಾಂತಿ ಹಬ್ಬದ ಒಳಗಾಗಿ ಕೇತು, ಸೂರ್ಯ ಮತ್ತು ರಾಹು ಗ್ರಹಗಳು ಜೊತೆಯಾಗಲಿದ್ದು, ಈ ಹಿನ್ನೆಲೆಯಲ್ಲಿ "ಬಹಳ ದೊಡ್ಡ ಗಲಾಟೆಗಳು ನಡೆಯಲಿವೆ" ಎಂದು ಎಚ್ಚರಿಕೆ ನೀಡಿದ್ದಾರೆ.

ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ಕುರಿತು ಪ್ರಸ್ತಾಪಿಸಿದ ಗುರೂಜಿ, "ಸಿದ್ಧರಾಮಯ್ಯ ಅವರು ತಮ್ಮ ಆರೋಗ್ಯ ಕ್ಷೀಣಿಸದಂತೆ ನೋಡಿಕೊಳ್ಳಬೇಕು" ಎಂದು ಸಲಹೆ ನೀಡಿದ್ದಾರೆ. ಒಟ್ಟಾರೆಯಾಗಿ, ಗುರೂಜಿ ಅವರ ಈ ಬ್ರಹ್ಮಾಂಡ ಭವಿಷ್ಯವು ರಾಜ್ಯ ರಾಜಕೀಯ ಮತ್ತು ಪ್ರಕೃತಿಯ ಬಗ್ಗೆ ದೊಡ್ಡ ಮಟ್ಟದ ಕುತೂಹಲ ಮತ್ತು ಚರ್ಚೆಯನ್ನು ಹುಟ್ಟುಹಾಕಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು