ಬೆಂಗಳೂರು: ನಟ ದರ್ಶನ್ (Darshan Thoogudeepa) ಅವರಿಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕನಿಷ್ಠ ಸೌಲಭ್ಯಗಳನ್ನು ಒದಗಿಸಿಲ್ಲ ಎಂಬ ಆರೋಪಕ್ಕೆ ಸಂಬಂಧಿಸಿದಂತೆ, ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯ ಮಹತ್ವದ ಆದೇಶ ನೀಡಿದೆ. ಕೊಲೆ ಪ್ರಕರಣದ ಆರೋಪಿ ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಭಾಗಶಃ ಅಂಗೀಕರಿಸಿದೆ.
ಜೈಲಿಗೆ ಭೇಟಿ ನೀಡಿ ಪರಿಶೀಲನೆಗೆ ಸೂಚನೆ
ದರ್ಶನ್‌ಗೆ ಜೈಲಿನಲ್ಲಿ ಲಭ್ಯವಿರುವ ಸೌಲಭ್ಯಗಳ ಕುರಿತು ನ್ಯಾಯಾಲಯ ಖುದ್ದು ಪರಿಶೀಲನೆ ನಡೆಸುವಂತೆ ಕೋರಿದ್ದ ಮನವಿಯನ್ನು ನ್ಯಾಯಾಲಯ ಮಾನ್ಯ ಮಾಡಿದೆ. ಈ ಕುರಿತು ನ್ಯಾಯಾಲಯವು ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗೆ ಸೂಚನೆ ನೀಡಿದೆ.
57ನೇ ಸಿಸಿಎಚ್ ನ್ಯಾಯಾಲಯದ ನ್ಯಾಯಾಧೀಶರು ನೀಡಿರುವ ಆದೇಶದ ಪ್ರಕಾರ, ಕಾರ್ಯದರ್ಶಿಯವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿ ಸೌಲಭ್ಯಗಳನ್ನು ಪರಿಶೀಲಿಸಬೇಕು. ಅಲ್ಲದೆ, ನ್ಯಾಯಾಲಯದ ಹಿಂದಿನ ಆದೇಶಗಳು ಸರಿಯಾಗಿ ಪಾಲನೆಯಾಗಿದೆಯೇ ಅಥವಾ ಇಲ್ಲವೇ ಎಂಬುದನ್ನು ಪರಿಶೀಲಿಸಿ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ.
ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿ ನೀಡುವ ಪರಿಶೀಲನಾ ವರದಿಯ ನಂತರ ಈ ಕುರಿತು ಮುಂದಿನ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.
Tags
News
.png)