ದಸರಾ ರಜೆ ವಿಸ್ತರಣೆ - ಪಾಠ ಸರಿದೂಗಿಸಲು ವಿಶೇಷ ತರಗತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು (Bengaluru): ಜಾತಿ ಗಣತಿ ಸಮೀಕ್ಷೆ (Caste Survey) ಕಾರ್ಯಕ್ಕಾಗಿ ದಸರಾ ರಜೆಯನ್ನು ಅಕ್ಟೋಬರ್ 18ರವರೆಗೆ ವಿಸ್ತರಣೆ ಮಾಡಿದ್ದರೂ, ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ (DCM) ಡಿ.ಕೆ. ಶಿವಕುಮಾರ್ ಅವರು ಭರವಸೆ ನೀಡಿದ್ದಾರೆ.

ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಸಿಎಂ, ರಜೆಯಿಂದಾಗಿ ಕಳೆದುಕೊಳ್ಳುವ ಪಾಠಗಳನ್ನು ಸರಿದೂಗಿಸಲು ವಿಶೇಷ ತರಗತಿಗಳನ್ನು (Special Classes) ನಡೆಸಲು ಸರ್ಕಾರ ನಿರ್ಧರಿಸಿದೆ ಎಂದು ಸ್ಪಷ್ಟಪಡಿಸಿದರು.

ಮಕ್ಕಳ ಕಲಿಕೆಗೆ ತೊಂದರೆಯಾಗದಂತೆ ಕ್ರಮ

ಸಮೀಕ್ಷಾ ಕಾರ್ಯದಲ್ಲಿ ಶಿಕ್ಷಕರು ತೊಡಗಿಸಿಕೊಂಡರೂ ಅಥವಾ ರಜೆ ವಿಸ್ತರಣೆಯಿಂದಲೂ ಯಾವುದೇ ಮಕ್ಕಳ ವಿದ್ಯಾಭ್ಯಾಸಕ್ಕೆ ಅಥವಾ ಕಲಿಕೆಗೆ ತೊಂದರೆಯಾಗುವುದಿಲ್ಲ, ಎಂದು ಡಿ.ಕೆ. ಶಿವಕುಮಾರ್ ಹೇಳಿದರು.

ಶಿಕ್ಷಕರು ಮತ್ತು ಅಧಿಕಾರಿಗಳು ಸಮೀಕ್ಷಾ ಕಾರ್ಯವನ್ನು ಆದ್ಯತೆ ಮೇಲೆ ಪೂರ್ಣಗೊಳಿಸಬೇಕು. ಆದರೆ, ರಜೆಯ ದಿನಗಳನ್ನು ಸರಿದೂಗಿಸಲು ಮತ್ತು ನಿಗದಿತ ಪಠ್ಯಕ್ರಮವನ್ನು ಮುಗಿಸಲು ಸ್ಪೆಷಲ್ ಕ್ಲಾಸ್‌ಗಳನ್ನು ನಡೆಸಿ ಮಕ್ಕಳಿಗೆ ಪಾಠ-ಪಠ್ಯಗಳನ್ನು ಹೇಳಿಕೊಡಲಾಗುವುದು ಎಂದು ಅವರು ತಿಳಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು