ಬೆಂಗಳೂರು (Bengaluru): ಮಾಜಿ ಪ್ರಧಾನಿ ಹಾಗೂ ಜೆಡಿಎಸ್ (JDS) ವರಿಷ್ಠ ಹೆಚ್.ಡಿ. ದೇವೇಗೌಡ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅನಾರೋಗ್ಯ ಕಾಣಿಸಿಕೊಂಡ ಕಾರಣ, ದೇವೇಗೌಡ ಅವರನ್ನು ನಗರದ ಮಣಿಪಾಲ್ ಆಸ್ಪತ್ರೆಗೆ (Manipal Hospital) ದಾಖಲಿಸಿ ತಪಾಸಣೆ ಮತ್ತು ಚಿಕಿತ್ಸೆ ನೀಡಲಾಗಿದೆ. ಸದ್ಯ ಲಭ್ಯವಿರುವ ಮಾಹಿತಿ ಪ್ರಕಾರ, ಅವರಿಗೆ ಸೂಕ್ತ ಚಿಕಿತ್ಸೆ ನೀಡಲಾಗಿದ್ದು, ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ತಿಳಿದುಬಂದಿದೆ.
