ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಪೋಟ: 6 ಕಾರ್ಮಿಕರು ಸಜೀವ ದಹನ

ಆಂಧ್ರಪ್ರದೇಶದಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ಪಟಾಕಿ ಕಾರ್ಖಾನೆಯಲ್ಲಿ ಆದ ಸ್ಪೋಟದಲ್ಲಿ ಆರು ಮಂದಿ ಕಾರ್ಮಿಕರು ಸಜೀವ ದಹನವಾಗಿದ್ದಾರೆ. ಇತರ ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಈ ಭಾರಿ ಅಗ್ನಿ ಅವಘಡವು ಆಂಧ್ರಪ್ರದೇಶದ ಅಂಬೇಡ್ಕರ್ ಕೊನಸೀಮಾ ಜಿಲ್ಲೆಯ ರಾಯವರಂ ಮಂಡಲದಲ್ಲಿರುವ ಲಕ್ಷ್ಮಿ ಗಣಪತಿ ಪಟಾಕಿ ತಯಾರಿಕಾ ಕೇಂದ್ರದಲ್ಲಿ ನಡೆದಿದೆ.

ಕಾರ್ಖಾನೆಯಲ್ಲಿ ಪಟಾಕಿ ತಯಾರಿಸುತ್ತಿದ್ದಾಗ ಆಕಸ್ಮಿಕವಾಗಿ ಸ್ಪೋಟ ಸಂಭವಿಸಿದೆ ಎಂದು ವರದಿಯಾಗಿದೆ. ಬಲಿಯಾದವರು ಮತ್ತು ಗಾಯಾಳುಗಳು: ಮೃತಪಟ್ಟವರು ಮತ್ತು ಗಾಯಗೊಂಡವರೆಲ್ಲರೂ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆಗೆ ರವಾನಿಸಲಾಗಿದೆ.

ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ಕೈಗೊಂಡರು. ಅಗ್ನಿಶಾಮಕ ಸಿಬ್ಬಂದಿ ಪ್ರಸ್ತುತ ಬೆಂಕಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಭೀಕರ ಘಟನೆಗೆ ನಿಖರ ಕಾರಣಗಳ ಕುರಿತು ಪೊಲೀಸರು ಮತ್ತು ಅಗ್ನಿಶಾಮಕ ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು