ಆರ್‌ಎಸ್‌ಎಸ್‌ ನಿಷೇಧಕ್ಕೆ ಪತ್ರ ಬರೆದ ಬೆನ್ನಲ್ಲೇ ಸಚಿವ ಪ್ರಿಯಾಂಕ್ ಖರ್ಗೆಗೆ ಜೀವ ಬೆದರಿಕೆ ಕರೆ!

ಬೆಂಗಳೂರು: ರಾಜ್ಯದ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಜೀವ ಬೆದರಿಕೆ ಕರೆಗಳು ಬರುತ್ತಿರುವ ಆಘಾತಕಾರಿ ಮಾಹಿತಿ ಲಭ್ಯವಾಗಿದೆ. ಸರ್ಕಾರಿ ಸಂಸ್ಥೆಗಳು, ಶಾಲೆ-ಕಾಲೇಜುಗಳಲ್ಲಿ ಆರ್‌ಎಸ್‌ಎಸ್‌ (ರಾಷ್ಟ್ರೀಯ ಸ್ವಯಂಸೇವಕ ಸಂಘ) ಚಟುವಟಿಕೆಗಳನ್ನು ನಿಷೇಧಿಸುವಂತೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದ ಬೆನ್ನಲ್ಲೇ ಈ ಬೆದರಿಕೆ ಕರೆಗಳು ಬಂದಿವೆ.

ಈ ಬಗ್ಗೆ ಸಚಿವರು ತಮ್ಮ 'ಎಕ್ಸ್' (ಟ್ವಿಟರ್) ಖಾತೆಯಲ್ಲಿ ಸ್ವತಃ ಮಾಹಿತಿ ಹಂಚಿಕೊಂಡಿದ್ದಾರೆ.

ಪ್ರಿಯಾಂಕ್ ಖರ್ಗೆ ಅವರ ಟ್ವೀಟ್‌ನಲ್ಲೇನಿದೆ:

ಸಚಿವ ಪ್ರಿಯಾಂಕ್ ಖರ್ಗೆ ಅವರು, "ಕಳೆದ ಎರಡು ದಿನಗಳಿಂದ ನನ್ನ ಫೋನ್ ರಿಂಗಣಿಸುವುದನ್ನು ನಿಲ್ಲಿಸಿಲ್ಲ. ಸರ್ಕಾರಿ ಶಾಲೆಗಳು, ಕಾಲೇಜುಗಳು ಮತ್ತು ಸಾರ್ವಜನಿಕ ಸಂಸ್ಥೆಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳನ್ನು ಪ್ರಶ್ನಿಸಲು ಮತ್ತು ತಡೆಯಲು ನಾನು ಧೈರ್ಯ ಮಾಡಿದ್ದರಿಂದ ನನ್ನ ಮತ್ತು ನನ್ನ ಕುಟುಂಬದ ವಿರುದ್ಧ ಬೆದರಿಕೆಗಳು ಮತ್ತು ಅತ್ಯಂತ ಕೆಟ್ಟ ನಿಂದನೆಗಳಿಂದ ತುಂಬಿದ ಕರೆಗಳು ಬರುತ್ತಿವೆ. ಆದರೆ ನಾನು ಇದರಿಂದ ವಿಚಲಿತನಾಗುವುದಿಲ್ಲ ಅಥವಾ ಆಶ್ಚರ್ಯಪಡುವುದಿಲ್ಲ" ಎಂದು ಬರೆದಿದ್ದಾರೆ.

"ಆರ್‌ಎಸ್‌ಎಸ್ ಮಹಾತ್ಮ ಗಾಂಧಿ ಅಥವಾ ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಬಿಡದಿದ್ದಾಗ, ಅವರು ನನ್ನನ್ನು ಏಕೆ ಬಿಡುತ್ತಾರೆ? ಬೆದರಿಕೆಗಳು ಮತ್ತು ವೈಯಕ್ತಿಕ ನಿಂದನೆಗಳು ನನ್ನನ್ನು ಮೌನಗೊಳಿಸುತ್ತವೆ ಎಂದು ಅವರು ಭಾವಿಸಿದರೆ, ಅವರು ತಪ್ಪಾಗಿ ಭಾವಿಸುತ್ತಾರೆ. ಇದು ಇದೀಗ ಪ್ರಾರಂಭವಾಗಿದೆ. ಬುದ್ಧ, ಬಸವಣ್ಣ ಮತ್ತು ಬಾಬಾಸಾಹೇಬ್ ಅವರ ತತ್ವಗಳ ಮೇಲೆ ಸ್ಥಾಪಿತವಾದ ಸಮಾಜವನ್ನು ನಿರ್ಮಿಸುವ ಸಮಯ, ಸಮಾನತೆ, ವಿವೇಚನೆ ಮತ್ತು ಕರುಣೆಯಲ್ಲಿ ಬೇರೂರಿರುವ ಸಮಾಜ ಮತ್ತು ಈ ರಾಷ್ಟ್ರವನ್ನು ಅತ್ಯಂತ ಅಪಾಯಕಾರಿ ವೈರಸ್‌ಗಳಿಂದ ಶುದ್ಧೀಕರಿಸುವ ಸಮಯ ಇದು" ಎಂದು ಪ್ರಿಯಾಂಕ್ ಖರ್ಗೆ ಪ್ರತಿಪಾದಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು