ಮುಂಬೈ: ಎನ್‌ಸಿಪಿ ನಾಯಕ ಹಾಗೂ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಪ್ರಯಾಣಿಸುತ್ತಿದ್ದ ಸಣ್ಣ ವಿಮಾನವು ಬುಧವಾರ ಬೆಳಿಗ್ಗೆ ಮಹಾರಾಷ್ಟ್ರದ ಬಾರಾಮತಿಯಲ್ಲಿ ಇಳಿಯುವ ಪ್ರಯತ್ನದ ವೇಳೆ ಅಪಘಾತಕ್ಕೀಡಾಗಿದೆ. ಈ ದುರ್ಘಟನೆಯಲ್ಲಿ ಅಜಿತ್ ಪವಾರ್ ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದಾರೆ.
ಮುಂಬೈನಿಂದ ಬೆಳಿಗ್ಗೆ ಸುಮಾರು 8 ಗಂಟೆಗೆ ಹೊರಟಿದ್ದ ಈ ವಿಮಾನ, ಒಂದು ಗಂಟೆಯ ನಂತರ ಬಾರಾಮತಿ ವಿಮಾನ ನಿಲ್ದಾಣದ ಸಮೀಪ ಇಳಿಯುವಾಗ ಪತನಗೊಂಡಿತು. ಅಪಘಾತದ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.
ವರದಿಗಳ ಪ್ರಕಾರ, ಸ್ಥಳೀಯ ಸಂಸ್ಥೆ ಚುನಾವಣೆಯ ಹಿನ್ನೆಲೆಯಲ್ಲಿ ಅಜಿತ್ ಪವಾರ್ ಅವರು ಬಾರಾಮತಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಲ್ಕು ಪ್ರಮುಖ ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸಲು ಯೋಜನೆ ರೂಪಿಸಿದ್ದರು. ಈ ದುರಂತದಿಂದ ಮಹಾರಾಷ್ಟ್ರ ರಾಜಕೀಯ ವಲಯದಲ್ಲಿ ತೀವ್ರ ಶೋಕದ ವಾತಾವರಣ ನಿರ್ಮಾಣವಾಗಿದೆ.
Tags
News
